ಶಾಸಕರು Vs ಸಚಿವರು: ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬೆನ್ನಲ್ಲೇ ಮತ್ತೊಬ್ಬ ಶಾಸಕ ಅಸಮಾಧಾನ!

ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್‌ ಮುನಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.
 

Share this Video
  • FB
  • Linkdin
  • Whatsapp

ಕಾಂಗ್ರೆಸ್‌ ಪಾಳಯದಲ್ಲಿ ಇನ್ನೂ ಅಸಮಾಧಾನ ಕಡಿಮೆ ಆದಂತೆ ಕಾಣುತ್ತಿಲ್ಲ. ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಬಳಿಕ ಇನ್ನೊಬ್ಬ ಶಾಸಕ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಲಬುರಗಿಯ(Kalaburagi) ಕಾರ್ಯಕ್ರಮಕ್ಕೆ ಜೇವರ್ಗಿ ಶಾಸಕ ಅಜಯ್‌ ಸಿಂಗ್‌(Ajay Singh) ಗೈರಾಗಿದ್ದಾರೆ. ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಶನಿವಾರ ಕಲಬುರಗಿಯಲ್ಲಿ ನಡೆದ ಗೃಹಜ್ಯೋತಿ ಚಾಲನೆ ಕಾರ್ಯಕ್ರಮಕ್ಕೆ ಸಿಎಂ ಬಂದರೂ, ಅಜಯ್‌ ಸಿಂಗ್ ಮಾತ್ರ ಬಂದಿರಲಿಲ್ಲ. ಅವರು 15 ದಿನಗಳಿಂದ ಯುರೋಪ್‌ ಪ್ರವಾಸದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನಕ್ಕೂ ಪ್ರಿಯಾಂಕ್ ಖರ್ಗೆ ಅಡ್ಡಗಾಲು ಹಾಕಿದ್ದಾರೆ ಎಂದು ಸಹ ಹೇಳಲಾಗುತ್ತಿದ್ದು, ಇದಕ್ಕೂ ಅವರು ಮುನಿಸಿಕೊಂಡಂತೆ ಕಾಣುತ್ತಿದೆ. 

ಇದನ್ನೂ ವೀಕ್ಷಿಸಿ: ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !

Related Video