Asianet Suvarna News Asianet Suvarna News

ಅಮಿತ್ ಶಾ ಭೇಟಿ ಬಳಿಕ ಖಾತೆ ಫೈನಲ್, ಕುತೂಹಲ ಮೂಡಿಸಿದೆ ಕ್ಲೈಮ್ಯಾಕ್ಸ್..!

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶಾ ನೇತೃತ್ವದಲ್ಲಿ ಮಹತ್ವದ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಬೆಂಗಳೂರು (ಜ 16): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶಾ ನೇತೃತ್ವದಲ್ಲಿ ಮಹತ್ವದ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಹೊಸ ಸಂಪುಟ : ಯಡಿಯೂರಪ್ಪಗೆ ತಂದೊಡ್ಡಿದ ಹೊಸ ಸಂಕಟ..!

ಅಮಿತ್ ಶಾ ಜೊತೆ ಚರ್ಚೆ ನಡೆಸಿದ ಬಳಿಕ ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.  ಇಂದು ಬೆಳಗ್ಗೆ 11.30ಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಅಮಿತ್‌ ಶಾ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್‌ ಮೂಲಕ ಭದ್ರಾವತಿಗೆ ಪ್ರಯಾಣ ಬೆಳೆಸಲಿದ್ದಾರೆ. ಭದ್ರಾವತಿಯಲ್ಲಿ ಕೇಂದ್ರ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಭದ್ರಾವತಿಯಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.