ಬಸವಕಲ್ಯಾಣದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ, ಹುತಾತ್ಮರ ಸ್ಮಾರಕ ಲೋಕಾರ್ಪಣೆ ಮಾಡಿದ ಶಾ

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ.  ಮಾರ್ಚ್ 25ರಂದು ನರೇಂದ್ರ ಮೋದಿ  ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಮಾರ್ಚ್ 25ರಂದು ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದರು. ಇಂದು ಚುನಾವಣಾ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಶಾ ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಬೀದರ್ ಏರ್ ಬೇಸ್ ನಿಂದ ಗೋರಟಾ ಗ್ರಾಮಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಇನ್ನೂರು ಕನ್ನಡಿಗರ ಹತ್ಯೆಯಾದ ಸ್ಥಳದಲ್ಲಿ ಗ್ರಾಮಸ್ಥರ ಜೊತೆ ಸಂವಾದ ನಡೆಸಿದರು. ನಂತರ ಗೋರಟಾ ಗ್ರಾಮದ ಹುತಾತ್ಮರ ‌ಸ್ಮಾರಕ 103 ಅಡಿ ಎತ್ತರದ ಧ್ವಜ ಸ್ತಂಭ, ಸರ್ದಾರ್ ವಲ್ಲಭಭಾಯ್ ಪಟೇಲ್ ರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದರು. ಪ್ರತಿಮೆ ಲೋಕಾರ್ಪಣೆ ‌ಬಳಿಕ ಕೇಶವ ಕಾರ್ಯ ಸಂವರ್ಧನ ಸಮೀತಿಯವರು ಆಯೋಜಿರುವ ವೇದಿಕೆ ಕಾರ್ಯಕ್ರಮದಲ್ಲಿ‌ ಭಾಗಿಯಾಗಿದ್ದರು.

Related Video