ಇಂದು ಬೆಳಗಾವಿಗೆ ಅಮಿತ್ ಶಾ, ಲೋಕಸಭಾ ಟಿಕೆಟ್ ಫೈಟ್‌ಗೆ ಸಿಗುತ್ತಾ ಟ್ವಿಸ್ಟ್..?

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಲು ರಾಜ್ಯಾದ್ಯಂತ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶದ ಸಮಾರೋಪ ಬೆಳಗಾವಿಯಲ್ಲಿ ಭಾನುವಾರ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿಯಾಗಲಿದ್ದಾರೆ. 

First Published Jan 17, 2021, 10:32 AM IST | Last Updated Jan 17, 2021, 11:28 AM IST

ಬೆಂಗಳೂರು (ಜ. 17): ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಲು ರಾಜ್ಯಾದ್ಯಂತ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶದ ಸಮಾರೋಪ ಬೆಳಗಾವಿಯಲ್ಲಿ ಭಾನುವಾರ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿಯಾಗಲಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವಾಗತ: ವಿಶೇಷ ಉಡುಗೊರೆ ಕೊಟ್ಟ ಸಿಟಿ ರವಿ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ರಾಜ್ಯ ಸರ್ಕಾರದ ಹಲವು ಸಚಿವರು, ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ್‌ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ, ಜಿಪಂ ಮತ್ತು ತಾಪಂ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ಸಮಾವೇಶ ಸಂಘಟಿಸಲಾಗಿದ್ದು, ಅಮಿತ್ ಶಾ ಜೊತೆ ಮಹತ್ವದ ಚರ್ಚೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. 
 

Video Top Stories