ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ
ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಪರ ಪ್ರಚಾರ
ಹಳೇ ಮೈಸೂರು ಭಾಗದಲ್ಲಿ ಗೆಲ್ಲಲು ಬಿಜೆಪಿ ತಂತ್ರ

Share this Video
  • FB
  • Linkdin
  • Whatsapp

ಚಾಮರಾಜನಗರ:ವಿಧಾನಸಭಾ ಚುನಾವಣೆ ಹಿನ್ನೆಲೆ ಗುಂಡ್ಲುಪೇಟೆಗೆ ಮೊಟ್ಟ ಮೊದಲ ಬಾರಿಗೆ ಆಗಮಿಸಿರುವ ಅಮಿತ್‌ ಶಾ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಪರ ರೋಡ್ ಶೋ ನಡೆಸಿದರು. ಈ ಮೂಲಕ ಬಿಜೆಪಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿದ್ದು, ಅಮಿತ್‌ ಶಾ ಪಕ್ಷಕ್ಕೆ ಮತವನ್ನು ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಅಮಿತ್ ಶಾ ರೋಡ್‌ ಶೋ ಹಿನ್ನೆಲೆ ಸುಮಾರು 10ರಿಂದ 12 ಸಾವಿರ ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮತ್ತೆ ಮುಸ್ಲಿಂ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಅವರು ತುಂಬಾ ಕೆಟ್ಟ ರಾಜಕಾರಣವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಎಸ್‌ಸಿ, ಎಸ್‌ಟಿಗೆ ಮೀಸಲಾತಿಯನ್ನು ನೀಡಿಲ್ಲ ಎಂದು ಹೇಳುವ ಮೂಲಕ ಅಮಿತ್‌ ಶಾ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ: ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

Related Video