Asianet Suvarna News Asianet Suvarna News

ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರ ಆಕ್ರೋಶ: ಸಭೆಯಲ್ಲಿ ಬೆಂಬಲಿಗರ ಗಲಾಟೆ

ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮೂಲ ಕಾಂಗ್ರೆಸ್ ನಾಯಕರನ್ನು ಬಿಟ್ಟು ಕಚೇರಿ ಉದ್ಘಾಟಿಸಿದ್ದಕ್ಕೆ ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
 

ಹೊಸಕೋಟೆ ಕಾಂಗ್ರೆಸ್’‌ನಲ್ಲಿ  ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಶರತ್‌ ಬಚ್ಚೇಗೌಡರ ಬೆಂಬಲಿಗರು ಹಾಗೂ ಮೂಲ ಕಾಂಗ್ರೆಸ್ಸಿಗರ ನಡುವೆ ಗಲಾಟೆ ನಡೆದಿದೆ. ಮೂಲ ಕಾಂಗ್ರೆಸ್ಸಿಗರಿಗೆ ಬೆಲೆ ನೀಡುತ್ತಿಲ್ಲ ಅನ್ನುವ ಆರೋಪದಲ್ಲಿ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಚೇರಿ ಉದ್ಘಾಟನೆ, ಸದಸ್ಯತ್ವ ವಿಚಾರಗಳಲ್ಲಿ ಶರತ್ ಬಚ್ಚೇಗೌಡರ‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕಾರ್ಯಕರ್ತರು ಕಿಡಿ ಕಾರಿದ್ದಾರೆ.

Video Top Stories