Asianet Suvarna News Asianet Suvarna News

ಅಮಿತ್‌ ಶಾಗೆ ದ್ವೇಷ ರಾಜಕೀಯ ಬೇಡ ಎಂದು ಹೇಳಿದ್ದೇನೆ :ಸಿಎಂ ಸಿದ್ದರಾಮಯ್ಯ

ಅಕ್ಕಿ ವಿತರಣೆ ಬಗ್ಗೆ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

First Published Jun 22, 2023, 11:46 AM IST | Last Updated Jun 22, 2023, 11:46 AM IST

ಅಕ್ಕಿ ವಿತರಣೆ ಬಗ್ಗೆ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ  ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ,  ಎಫ್.ಸಿ.ಐ  ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ  ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ  ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.  ಹಾಗೇ ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

Video Top Stories