ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ, ಹಣ ಕೂಡ ಅಕೌಂಟ್‌ಗೆ ಬರಲಿದೆ: ಮುನಿಯಪ್ಪ
ಫಲಾನುಭವಿಗಳ ಖಾತೆಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣವನ್ನು ಜುಲೈ 1ರಿಂದ ಹಾಕಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರು: ನಾವು ಮಾತು ಕೊಟ್ಟಂತೆ ಜುಲೈ 1 ರಿಂದಲೇ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. ಅಕ್ಕಿ ಜೊತೆಗೆ ಫಲಾನುಭವಿಗಳಿಗೆ ಹಣವನ್ನು ಹಾಕಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಅವರು ಹೇಳಿದ್ದಾರೆ. ಪೂರ್ತಿಯಾಗಿ ಅಕ್ಕಿ ಸಿಗುವ ತನಕ ಈ ರೀತಿ ಮಾಡುತ್ತೇವೆ. ಬಳಿಕ ಅಕ್ಕಿಯನ್ನೇ ಕೊಡುತ್ತೇವೆ ಎಂದು ಆಹಾರ ಸಚಿವರು ಹೇಳಿದ್ದಾರೆ. ದಕ್ಷಿಣ ಭಾಗದ ಜನರಿಗೆ ರಾಗಿ, ಉತ್ತರ ಕರ್ನಾಟಕ ಭಾಗದ ಜನರಿಗೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನಾಗಿದ್ದು, ಜೋಳ ಸಂಗ್ರಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ನಾಳೆಯಿಂದಲೇ ಜನರ ಬ್ಯಾಂಕ್ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತದೆ ಎಂದು ಅವರು ಹೇಳಿದರು.
ಇದನ್ನೂ ವೀಕ್ಷಿಸಿ: 11 ಕಡೆ.. 30 ಗಂಟೆ ದಾಳಿ.. ಸಿಕ್ಕಿದ್ದು ಕೋಟಿ ಕೋಟಿ: ಸಂಬಳ ಸಾವಿರ, ಆದ್ರೆ ಈತ ಕೋಟಿ ಕುಳ..!