Gujarat Election 2022 Asianet Survey: ಗುಜರಾತ್‌ನಲ್ಲಿ ಮತ್ತೆ ಬಿಜೆಪಿ: ಕುಗ್ಗಿದ ಕಾಂಗ್ರೆಸ್ ಬಲ
ಬಹು ನಿರೀಕ್ಷಿತ ಗುಜರಾತ್ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಚುನಾವಣಾ ಕಣ ಈಗಾಗಲೇ ರಂಗೇರಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಮೋದಿ ನಡುವೆ ವಾಗ್ಯುದ್ಧವೂ ಈಗಾಗಲೇ ಆರಂಭವಾಗಿದೆ.
ಬಹು ನಿರೀಕ್ಷಿತ ಗುಜರಾತ್ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಚುನಾವಣಾ ಕಣ ಈಗಾಗಲೇ ರಂಗೇರಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಮೋದಿ ನಡುವೆ ವಾಗ್ಯುದ್ಧವೂ ಈಗಾಗಲೇ ಆರಂಭವಾಗಿದೆ. ಕಳೆದ ಬಾರಿ ಕಾಂಗ್ರೆಸ್‌ನಲ್ಲಿದ್ದ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರಿದ್ದಾರೆ. ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಮಿತಿಯ ಸಮಸ್ಯೆ ಅವರನ್ನು ಕಾಡಿತ್ತು. ಆದರೆ ಈ ಬಾರಿ ಸ್ಪರ್ಧೆ ಖಚಿತವಾಗಿದೆ. ಪಟೇಲ್ ಬಿಜೆಪಿ ಸೇರ್ಪಡೆಯಿಂದ ಯುವ ಸಮೂಹದ ಮತಗಳು ಕಾಂಗ್ರೆಸ್‌ನಿಂದ ದೂರವಾಗುವ ಸಾಧ್ಯತೆಯಿದೆ. ಅಲ್ಪೇಶ್ ಠಾಕೂರ್ ಕೂಡ ಈ ಬಾರಿ ಕಾಂಗ್ರೆಸ್ ಜೊತೆಗಿಲ್ಲ. ಇವೆಲ್ಲವೂ ಕಾಂಗ್ರೆಸ್ ಮತ ಬ್ಯಾಂಕ್ ಕಡಿಮೆ ಮಾಡುವ ಸಾಧ್ಯತೆಯಿದೆ. ಹಾಗಾದರೆ ಗುಜರಾತ್ ಜನರು ಈ ಬಾರಿ ಯಾರನ್ನು ಗೆಲ್ಲಿಸಲಿದ್ದಾರೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಯನ್ನು ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಮತ್ತು ಸಿ ಫೋರ್ ಮಾಡಿದಾಗ ಬಿಜೆಪಿ ಗೆಲ್ಲುವ ಫೇವರೇಟ್ ಎಂಬುದು ತಿಳಿದುಬಂದಿದೆ.