BTM ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆಗೆ ಕುಳಿತ ತೇಜಸ್ವಿ ಸೂರ್ಯ
ಬಿಟಿಎಂ ಲೇಔಟ್‌ನ ಒಂದನೇ ಹಂತದಲ್ಲಿ ಪ್ರಚಾರ ಮಾಡುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ನವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರು: ಬಿಟಿಎಂ ಲೇಔಟ್‌ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪರ ಪ್ರಚಾರ ಮಾಡುವ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಲಿತೇಶ್, ನಂದನ್ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇವರ ವಿರುದ್ಧ ಮಡಿವಾಳ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ದೂರನ್ನು ನೀಡಿದ್ದಾರೆ. ಈ ಪ್ರಕರಣವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಸಂಸದ ತೇಜಸ್ವಿ ಸೂರ್ಯ ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆ ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಡಿಸಿಪಿ ಭರವಸೆ ನೀಡಿದ್ದಾರೆ.
ಇದನ್ನೂ ವೀಕ್ಷಿಸಿ: ರಾಜಕಾರಣಿಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ನಾಳೆಯಿಂದ ಮನೆ ಮನೆಗೆ ತೆರಳಿ ಮತಯಾಚನೆ