Asianet Suvarna News Asianet Suvarna News

ಬಿಜೆಪಿ ತಿರುಗುಬಾಣವಾದ ಬಾಬುರಾವ್ ಚಿಂಚನಸೂರು: ಏನಿದು ಕಾಂಗ್ರೆಸ್‌ ಮಾಸ್ಟರ್‌ ಸ್ಟ್ರೋಕ್?

ಬಿಜೆಪಿಯಿಂದ ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಸುದ್ದಿ ಫೆಬ್ರವರಿಯಲ್ಲಿ ಪ್ರಸಾರ ಮಾಡಲಾಗಿತ್ತು. ಈ ವೇಳೆ ಮಾಧ್ಯಮದ ಮೇಲೆ ಹರಿಹಾಯ್ದಿದ್ದ ಚಿಂಚನಸೂರು ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಈ ಮೂಲಕ ಬಿಜೆಪಿಗೆ ತಿರುಗುಬಾಣವಾಗಿದ್ದಾರೆ.

ಬೆಂಗಳೂರು (ಮಾ.23): ಬಿಜೆಪಿಯಿಂದ ಕಾಂಗ್ರೆಸ್ ಸೇರಿಕೊಳ್ಳುತ್ತಾರೆ ಎಂಬ ಸುದ್ದಿ ಫೆಬ್ರವರಿಯಲ್ಲಿ ಪ್ರಸಾರ ಮಾಡಲಾಗಿತ್ತು. ಈ ವೇಳೆ ಮಾಧ್ಯಮದ ಮೇಲೆ ಹರಿಹಾಯ್ದಿದ್ದ ಚಿಂಚನಸೂರು ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಈ ಮೂಲಕ ಬಿಜೆಪಿಗೆ ತಿರುಗುಬಾಣವಾಗಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿದ್ದಾಗ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಮುಂದುವರೆದು ನಮ್ಮದು ಮತ್ತು ಖರ್ಗೆ ಅವರದು ತಂದೆ- ಮಗನ ನಡುವಿನ ಜಗಳದಂತೆ ಎಂದು ಚಿಂಚನಸೂರ ತಿಳಿಸಿದ್ದಾರೆ. ಇನ್ನು  ಡಿ.ಕೆ.ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದರು.

Video Top Stories