Asianet Suvarna News Asianet Suvarna News

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ್ದ ಚಿಂಚನಸೂರು ಮತ್ತೆ ಕಾಂಗ್ರೆಸ್ ಸೇರ್ಪಡೆ!

ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. 

ಬೆಂಗಳೂರು (ಮಾ.23): ಪ್ರಿಯಾಂಕ ಖರ್ಗೆ, ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದಾಗಿ ತೊಡೆ ತಟ್ಟಿದ ಬಾಬುರಾವ್ ಚಿಂಚನಸೂರು ಇದೀಗ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಮನೆಯಲ್ಲಿ ಕಾಂಗ್ರೆಸ್ ಸೇರಿದ ಚಿಂಚನಸೂರು ಇದೀಗ ಬಿಜೆಪಿ ವಿರುದ್ಧ ತೊಡೆತಟ್ಟಿದ್ದಾರೆ. ಬಾಬುರಾವ್‌ ಚಿಂಚನಸೂರ್‌ ಅವರು ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್‌ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿಯ ಟಿಕೆಟ್‌ ಟಿಕೆಟ್‌ ಕೇಳಿದ್ದರು. ಆದರೆ, ಸದ್ಯ ಅವರು ವಿಧಾನಪರಿಷತ್‌ ಸದಸ್ಯರಾಗಿರುವ ಕಾರಣ ಟಿಕೆಟ್‌ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದ ಅವರು ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಾಬುರಾವ್‌ ಚಿಂಚನಸೂರ್‌ ಅವರು ನಾನು ಸತ್ತರೂ ಮತ್ತೆ ಕಾಂಗ್ರೆಸ್‌ ಸೇರುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
 

Video Top Stories