ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ?: ಹುಟ್ಟುಹಬ್ಬ ಆಚರಣೆಗೆ ಬಂದಿದ್ದೇವೆ ಎಂದ ಬೊಮ್ಮಾಯಿ

ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಬಿಜೆಪಿ ನಾಯಕರು ಸೇರಿದ್ದಾರೆ. ಆರ್‌.ಅಶೋಕ್‌ ಹುಟ್ಟುಹಬ್ಬ ಹಿನ್ನೆಲೆ ಇಲ್ಲಿಗೆ ಬಂದಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಚಿಕ್ಕಮಗಳೂರು: ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜಕೀಯದ ಬಗ್ಗೆ ಮಾತನಾಡಲು ಇಲ್ಲಿಗೆ ಬರಬೇಕಾ ?. ವಿಪಕ್ಷ ನಾಯಕನ ಬಗ್ಗೆ ನಾಳೆ ಸಂಜೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾವು ಇಲ್ಲಿಗೆ ಬಂದಿರೋದು ಶಾಸಕ ಆರ್‌. ಅಶೋಕ್‌ ಹುಟ್ಟುಹಬ್ಬ ಆಚರಣೆಗೆ ಮಾತ್ರ ಎಂದು ಬೊಮ್ಮಾಯಿ ಹೇಳಿದ್ದಾರೆ. ಅವರು ಆರನೇ ವರ್ಷ ಇಲ್ಲಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ. ಪ್ರತಿ ವರ್ಷ ಆರ್‌. ಅಶೋಕ್‌ ತಮ್ಮ ಹುಟ್ಟುಹಬ್ಬವನ್ನು ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿಯೇ ಆಚರಿಸಿಕೊಳ್ಳುತ್ತಿದ್ದರು.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ವಿದ್ಯಾರ್ಥಿ ನಾಯಕರ ಗಲಾಟೆ:NSUI ಕಾರ್ಯಕರ್ತರಿಂದ ಗೂಂಡಾ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Related Video