Asianet Suvarna News Asianet Suvarna News

ಬೆಳಗಾವಿ ಲೋಕಸಭೆ ಟಿಕೆಟ್‌ಗೆ ಬಿಜೆಪಿಯಲ್ಲಿ ಭಾರೀ ಕಸರತ್ತು, ಯಾರಿಗೆ ಅದೃಷ್ಟ..?

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಬೇಕಿದೆ. ಇದಕ್ಕಾಗಿ ಆಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ.

ಬೆಳಗಾವಿ, (ಅ.08): ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಬೇಕಿದೆ. ಇದಕ್ಕಾಗಿ ಆಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ.

ಬೆಳಗಾವಿ ಟಿಕೆಟ್‌ ಅಂಗಡಿ ಕುಟುಂಬಕ್ಕೆ ನೀಡಲು ಲಾಬಿ, ಅಂಗಡಿ ಪುತ್ರಿ ಪರ ಶೆಟ್ಟರ್‌!

ಸುರೇಶ್‌ ಅಂಗಡಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ಸ್ಥಾನ ಪಡೆದ ಬಳಿಕ ಮಹತ್ವದ ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ಕಾರಣದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ವಿಶೇಷ ಮಹತ್ವವಿದ್ದಿ, ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹನುಮಂತನ ಬಾಲದಂತೆ ಬೆಳೆಯುತ್ತಿದೆ.

Video Top Stories