Asianet Suvarna News Asianet Suvarna News

ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

Nov 22, 2020, 11:30 AM IST

ಬೆಳಗಾವಿ(ನ.22): ಕೇಂದ್ರ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಹೌದು, ಕಮಲ ಪಾಳಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. 

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಈಗಾಗಲೇ 25 ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ಗೆ ಕಳುಹಿಸುವ ಜವಾಬ್ದಾರಿಯನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ವಹಿಸಲಾಗಿದೆ. ಅಂತಿಮವಾಗಿ ಯಾರಿಗೆ ಬಿಜೆಪಿ ಟಿಕೆಟ್‌ ಒಲಿಯಲಿದೆ ಎಂಬುದನ್ನ ಕಾದು ನೋಡಬೇಕಿದೆ.