ಸಿಎಂ ಬೊಮ್ಮಾಯಿ ಭೇಟಿಯಾದ ಬೆಳಗಾವಿ ಪಾಲಿಕೆ ಸದಸ್ಯರು

*  ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದ ಪಾಲಿಕೆ ಸದಸ್ಯರು 
*  ಬೆಳಗಾವಿ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿಗೆ ಮನವಿ
*  ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಕೃತಜ್ಞತೆ 
 

Share this Video
  • FB
  • Linkdin
  • Whatsapp

ಬೆಂಗಳೂರು(ಸೆ.13): ಬೆಳಗಾವಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದಾರೆ. ಕೇಸರಿ ಪೇಟಾದಲ್ಲೇ ವಿಧಾನಸೌಧಕ್ಕೆ ಆಗಮಿಸಿದ ನೂತನ ಸದಸ್ಯರು ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಬೆಳಗಾವಿ ನಗರದ ಅಭಿವೃದ್ಧಿಗೆ ಸಿಎಂ ಬೊಮ್ಮಾಯಿ ಅವರಿಗೆ ಮನವಿಯನ್ನ ಸಲ್ಲಿಸಿದ್ದಾರೆ. ಗೆಲುವಿಗೆ ಕಾರಣರಾದ ಎಲ್ಲ ನಾಯಕರಿಗೆ ಪಾಲಿಕೆ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ. ಶಾಸಕ ಅಭಯ ಪಾಟೀಲ್, ಅನಿಲ್‌ ಬೆನಕೆ ನೇತೃತ್ವದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ್ದಾರೆ. 

ಬೆಲೆ ಏರಿಕೆ ಖಂಡಿಸಿ ಸದನಕ್ಕೆ ಎತ್ತಿನಗಾಡಿ ಮೂಲಕ ಬರಲಿದ್ದಾರೆ ಡಿಕೆಶಿ, ಸಿದ್ದರಾಮಯ್ಯ

Related Video