Bengaluru: ಬೆಂಗಳೂರು ಕೇಂದ್ರದ ಮತಪೆಟ್ಟಿಗೆಗಳು ಶಿಫ್ಟ್‌: ಸ್ಟ್ರಾಂಗ್ ರೂಮ್‌ನಲ್ಲಿ ಇವಿಎಂಗಳು, ಅಭ್ಯರ್ಥಿಗಳ ಭವಿಷ್ಯ ಭದ್ರ

ಮೌಂಟ್‌ ಕಾರ್ಮೆಲ್ ಕಾಲೇಜಿನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಮತಪೆಟ್ಟಿಗೆಗಳು ಶಿಫ್ಟ್
ವಸಂತ ನಗರದ ಕಾಲೇಜಿನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
 

First Published Apr 27, 2024, 11:37 AM IST | Last Updated Apr 27, 2024, 11:39 AM IST

ಮೊದಲ ಹಂತದ ಲೋಕಸಭಾ ಚುನಾವಣೆ( Lok Sabha elections 2024) ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ವಸಂತ ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ(Mount Carmel College) ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಮೌಂಟ್ ಕಾರ್ಮೆಲ್ ಕಾಲೇಜ್ ಮಸ್ಟರಿಂಗ್ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಂಗಳೂರು ಕೆಂದ್ರ(Bengaluru central) ಲೋಕಸಭಾ ಮತಪೆಟ್ಟಿಗೆಗಳು ಮೌಂಟ್ ಕಾರ್ಮೆಲ್ ಕಾಲೇಜ್‌ನಲ್ಲಿ ಶೇಖರಿಸಿ ಇಡಲಾಗಿದೆ. ಶಿವಾಜಿ ನಗರ 192 ಮತಗಟ್ಟೆಗಳಿಂದ ಆಗಮಿಸಿದ್ದ ಇವಿಎಂ ಯಂತ್ರಗಳನ್ನು, ಶಿವಾಜಿನಗರ ಕ್ಷೇತ್ರದ 162 ಸ್ಟ್ರಾಂಗ್ ರೂಮ್‌ನಲ್ಲಿ ಮತ ಪೆಟ್ಟಿಗೆಗಳನ್ನು ಇಟ್ಟು ಚುನಾವಣಾ ಅಧಿಕಾರಿಗಳು ಸೀಲ್‌ ಮಾಡಿದ್ದಾರೆ. ಅಭ್ಯರ್ಥಿಗಳ(Candidates) ಮುಂದೆ ಮತಯಂತ್ರ ಸೀಲ್ ಮಾಡಲಾಗಿದೆ. ಜೂನ್ 4ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ವೀಕ್ಷಿಸಿ:  ಕಲ್ಯಾಣ ಕರ್ನಾಟಕ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಲು ರಣತಂತ್ರ! ಡಿಕೆಶಿ ಮಾಸ್ಟರ್ ಪ್ಲ್ಯಾನ್‌ ಏನು?