
ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್
ಪಠ್ಯದಲ್ಲಿ ಭಗವದ್ಗೀತೆ ಸೇರಿಸುವ ಸಂಬಂಧ ಆಡಳಿತ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೊರಾಗಿವೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಮೈಸೂರು, (ಮಾ.20): ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಇದಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು, ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Schools Syllabus ಭಗವದ್ಗೀತೆಯನ್ನು ಪಾಠಮಾಡಿದರೆ ಮಕ್ಕಳ ಹೊಟ್ಟೆತುಂಬುತ್ತದೆಯೇ, ಬಿಜೆಪಿಗೆ ಹೆಚ್‌ಡಿಕೆ ಪ್ರಶ್ನೆ!
ಹೌದು...ಪಠ್ಯದಲ್ಲಿ ಭಗವದ್ಗೀತೆ ಸೇರಿಸುವ ಸಂಬಂಧ ಆಡಳಿತ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ಜೊರಾಗಿವೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.