Bhagavad Gita in school syllabus ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ನಮ್ಮ ವಿರೋಧ ಇಲ್ಲ. ಆದ್ರೆ, ಸಂವಿಧಾನದ ಆಶಯದಂತೆ ಜಾರಿಗೊಳಿಸಬೇಕು ಎಂದಿದ್ದಾರೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. 

First Published Mar 20, 2022, 9:56 PM IST | Last Updated Mar 20, 2022, 9:57 PM IST

ಹುಬ್ಬಳ್ಳಿ/ಮೈಸೂರು, (ಮಾ.20): ಶಾಲಾ ಪಠ್ಯದಲ್ಲಿ (School Syllabus) ಭಗವದ್ಗೀತೆ (Bhagavad Gita) ಅಳವಡಿಸುವ ವಿಚಾರದ ಬಗ್ಗೆ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ ಶುರುವಾಗಿದೆ.

ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ನಮ್ಮ ವಿರೋಧ ಇಲ್ಲ. ಆದ್ರೆ, ಸಂವಿಧಾನದ ಆಶಯದಂತೆ ಜಾರಿಗೊಳಿಸಬೇಕು ಎಂದಿದ್ದಾರೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.