ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌! ಕಾಣದ 'ಕೈ'ಗಳು ಪೊಲೀಸರ ವಶಕ್ಕೆ!

ಬಿಎ.ಎಸ್, ಯಡಿಯೂರಪ್ಪ ಮನೆಯ ಮೇಲೆ ಕಲ್ಲೆಸೆದು ದಾಂಧಲೆ ಮಾಡಿದ ಪ್ರಕರಣದಲ್ಲಿ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ, ಪ್ರೇಮ್ ಕುಮಾರ್ ಅವರನ್ನು ಬಂಧಿಸಲಾಗಿದೆ.

Share this Video
  • FB
  • Linkdin
  • Whatsapp

ಶಿವಮೊಗ್ಗ (ಮಾ.28): ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದಲ್ಲಿ ನಿನ್ನೆ ನಡೆದ ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ದಾಂದಲೆ ಹಿನ್ನೆಲೆಯಲ್ಲಿ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿದಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಬಿಎ.ಎಸ್, ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟದ ವೇಳೆ ಪೊಲೀಸರ ಮೇಲೆ ಕಲ್ಲೆಸೆದು ದಾಂಧಲೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಶಿಕಾರಿಪುರದ ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ನಾಯ್ಕ, ಪುನೀತ್ ನಾಯ್ಕ ಹಾಗೂ ಪ್ರೇಮ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಇಬ್ಬರು ಪಿಎಸ್ಐ ಸೇರಿದಂತೆ ಮೂವರು ಪೊಲೀಸರಿಗೆ ಕಲ್ಲುತೂರಾಟದಲ್ಲಿ ಗಾಯ ಆಗಿತ್ತು. 

Related Video