
ಆರ್‌ಜೆಡಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆಗೆ ಮುಂದಾದ ನಿತೀಶ್
Nitish Kumar Dumps BJP: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.
ಪಾಟ್ನಾ (ಆ. 09): ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ (Nitish Kumar) ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ನಿತೀಶ್ ಮತ್ತು ತೇಜಸ್ವಿ ಯಾದವ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾಗಲಿದ್ದು, ನಿತೀಶ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಈಗಾಗಲೇ ಆರ್‌ಜೆಡಿ ಮತ್ತು ಜೆಡಿಯು ನಡುವೆ ಮಾತುಕತೆ ಸಫಲವಾಗಿದ್ದು, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗುವ ಸಾಧ್ಯತೆಯಿದೆ. ಈ ಎಲ್ಲಾ ಮಾತುಕತೆಯ ಬೆನ್ನಲ್ಲೇ ನಿತೀಶ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜತೆ ಮೈತ್ರಿ ಮುರಿದುಕೊಂಡಿರುವ ನಿತೀಶ್‌ಗೆ ಕಾಂಗ್ರೆಸ್, ಸಿಪಿಐಎಂಎಲ್ ಸೇರಿದಂತೆ ಬಿಜೆಪಿಯೇತರ ಎಲ್ಲ ಪಕ್ಷಗಳೂ ಬೆಂಬಲ ಸೂಚಿಸಿವೆ.
2 ವರ್ಷದ ಬಳಿಕ ಉರುಳುವ ಭೀತಿಯಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ, ಆರ್‌ಜೆಡಿ ಜೊತೆ ದೋಸ್ತಿ!