Asianet Suvarna News Asianet Suvarna News

ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಜೆಡಿಯು, ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ!

ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯಗೊಳಿಸಿದ ಜೆಡಿಯು, ಇದೀಗ  ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Aug 9, 2022, 4:14 PM IST

ಪಾಟ್ನಾ(ಆ.09) ಬಿಜೆಪಿ ಹಾಗೂ ಜೆಡಿಯು ಮೈತ್ರಿ ಮುರಿದು ಬಿದ್ದಿದೆ. ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೇ ಹೊತ್ತಲ್ಲಿ ನಿತೀಶ್ ಕುಮಾರ್ ಹಾಗೂ ಜೆಡಿಯು ನಾಯಕ ತೇಜಸ್ವಿ ಯಾದವ್ ರಾಜ್ಯಪಾಲರ ಭೇಟಿಯಾಗಿ ಹೊಸ ಸರ್ಕಾರ ರಟನೆಗೆ ಹಕ್ಕು ಮಂಡನೆ ಸಲ್ಲಿಸಲಿದ್ದಾರೆ. ಜೆಡಿಯು ಶಾಸಕರು ಬಿಜೆಪಿ ಮೈತ್ರಿ ಮುರಿದುಕೊಳ್ಳಲು ಒಪ್ಪಿಕೊಂಡಿದ್ದು, ಹೊಸ ಸರ್ಕಾರಕ್ಕೆ ಕಾತರಗೊಂಡಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.