ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ.

Share this Video
  • FB
  • Linkdin
  • Whatsapp

ಧಾರವಾಡ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಗೆಲುವನ್ನು ಸಾಧಿಸಿದ್ದಾರೆ. ಇವರು ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ರನ್ನು ಸೋಲಿಸಿದ್ದಾರೆ. ಗೆಲುವಿನ ಬಗ್ಗೆ ಮಹೇಶ ಟೆಂಗಿನಕಾಯಿ ಮಾತನಾಡಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಜನ ಒಪ್ಪಿಕೊಂಡು, ಗೆಲ್ಲಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತವನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡುತ್ತೇನೆ. ಜೊತೆಗೆ ನನ್ನ ಸಾವಿರಾರು ಕಾರ್ಯಕರ್ತರು ತುಂಬಾ ಪರಿಶ್ರಮವನ್ನು ಹಾಕಿದ್ದಾರೆ. ಸ್ಟಾರ್‌ ಕ್ಯಾಂಪೇನರ್‌ ಆಗಿ ಕ್ಷೇತ್ರದ ಮತದಾರರೇ ಓಡಾಟ ಮಾಡಿದ್ದಾರೆ. ಈ ಕೀರ್ತಿ ನಮ್ಮ ಕಾರ್ಯಕರ್ತರಿಗೆ ಸಲ್ಲಬೇಕು. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

Related Video