ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ: ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚೆ..?

ಸಭೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಹಾಗೂ ಲವ್‌ ಜಿಹಾದ್‌ ವಿರುದ್ಧದ ಹೋರಾಟದ ಬಗ್ಗೆ ಚರ್ಚೆ| ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ ಅವರು ಭಾಗಿ| 

First Published Dec 5, 2020, 4:03 PM IST | Last Updated Dec 5, 2020, 4:03 PM IST

ಬೆಳಗಾವಿ(ಡಿ.05): ನಗರದಲ್ಲಿ ಮಹತ್ವದ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪ್ರಮುಖವಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಹಾಗೂ ಲವ್‌ ಜಿಹಾದ್‌ ವಿರುದ್ಧದ ಹೋರಾಟ.ಈ ಎರಡು ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕರ್ನಾಟಕ ಬಂದ್‌: ಕೊಪ್ಪಳದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ ಅವರು ಭಾಗಿಯಾಗಿದ್ದಾರೆ. ಸಭೆಯಲ್ಲಿ 140ಕ್ಕೂ ಹೆಚ್ಚು ಜನರು ಪ್ರತ್ಯಕ್ಷವಾಗಿ ಹಾಗೂ 400 ಕ್ಕೂ ಹೆಚ್ಚು ಜನ ಆನ್‌ಲೈನ್‌ ಮೂಲಕ ಭಾಗವಹಿಸಿದ್ದಾರೆ. 

"