ಶಿವರಾಮ್ ಹೆಬ್ಬಾರ್, ಸುನಿಲ್ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?
ಚುನಾವಣಾ ಆಯೋಗ ಚುನಾವಣೆಯಲ್ಲಿ ಖರ್ಚು ಮಾಡಲು 40 ಲಕ್ಷ ಹಣವನ್ನು ನಿಗದಿ ಮಾಡಿತ್ತು. ಆದ್ರೆ ಶಿವರಾಮ್ ಹೆಬ್ಬಾರ್ ಮತ್ತು ಸುನಿಲ್ ನಾಯ್ಕ್ ಇದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ ಮಾಜಿ ಶಾಸಕರಿಬ್ಬರಿಗೆ ಸಂಕಷ್ಟ ಎದುರಾಗಿದೆ. ಇವರು ಚುನಾವಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮೀರಿ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲ್ಲಾಪುರ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಭಟ್ಕಳ ಮಾಜಿ ಶಾಸಕ ಸುನಿಲ್ ನಾಯ್ಕ್‌ಗೆ ಇದೀಗ ಸಂಕಷ್ಟ ಎದುರಾಗಿದೆ. ಪೀಪಲ್ ರೆಪ್ರೆಸೆಂಟೇಶನ್ ಕಾಯ್ದೆಯಡಿ ಕಠಿಣ ಕ್ರಮ ಎದುರಿಸುವ ಸಾಧ್ಯತೆ ಇದೆ. ಚುನಾವಣಾ ಆಯೋಗ 40 ಲಕ್ಷ ರೂ. ಹಣವನ್ನು ನಿಗದಿ ಮಾಡಿತ್ತು, ಆದ್ರೆ ಇವರಿಬ್ಬರು 1.5 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಈ ಆರೋಪ ಸಾಬೀತಾದರೆ, ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗುತ್ತದೆ.
ಇದನ್ನೂ ವೀಕ್ಷಿಸಿ: ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?