ಕಾಂಗ್ರೆಸ್‌ ಶಾಸಕರು ಭ್ರಷ್ಟಾಚಾರದ ಬೀಜ ಬಿತ್ತಿ ವಸೂಲಿಗೆ ಹೊರಟಿದ್ದಾರೆ: ಸಿ.ಟಿ.ರವಿ ವಾಗ್ದಾಳಿ

ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ದೇಶ ಮತ್ತು ರಾಜ್ಯದಲ್ಲಿ ನಡೆದಿರುವ ಪ್ರಮುಖ ಹಗರಣಗಳನ್ನು ಪಟ್ಟಿ ಮಾಡಿದರೆ ಶೇ.90ರಷ್ಟು ಹಗರಣಗಳು ಕಾಂಗ್ರೆಸ್ ಅವಧಿಯಲ್ಲಿ ನಡೆದಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. 

First Published Aug 13, 2023, 5:17 PM IST | Last Updated Aug 13, 2023, 5:17 PM IST

ಚಿಕ್ಕಮಗಳೂರು (ಆ.13): ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ದೇಶ ಮತ್ತು ರಾಜ್ಯದಲ್ಲಿ ನಡೆದಿರುವ ಪ್ರಮುಖ ಹಗರಣಗಳನ್ನು ಪಟ್ಟಿ ಮಾಡಿದರೆ ಶೇ.90ರಷ್ಟು ಹಗರಣಗಳು ಕಾಂಗ್ರೆಸ್ ಅವಧಿಯಲ್ಲಿ ನಡೆದಿದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಕಾಂಗ್ರೆಸ್‌ & ಕರಪ್ಷನ್ ಒಂದೇ ನಾಣ್ಯದ ಎರಡು ಮುಖಗಳು. ದೇಶದಲ್ಲಿ ಭ್ರಷ್ಟಾಚಾರದ ಬೀಜ ಬಿತ್ತಿದ್ದೇ ಕಾಂಗ್ರೆಸ್ ಪಕ್ಷ, ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಹೆಚ್ಚಿನ ಕೈ ಶಾಸಕರು ಒಂದೇ ದಿನ ವಸೂಲಿಗೆ ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ. ನಾವು ಚುನಾವಣೆ ಗೆಲ್ಲಲು ಎಷ್ಟೆಲ್ಲಾ ಖರ್ಚು ಮಾಡಿದ್ದೇವೆ. ದಾನ-ಧರ್ಮಕ್ಕೆ ರಾಜಕಾರಣ ಮಾಡ್ತಿದ್ದೀವಾ?, ಖರ್ಚು ಮಾಡಿರುವುದು ವಸೂಲಾಗಬೇಕಲ್ಲವೇ? ಇಲ್ಲಾಂದರೆ ನಮ್ಮ ಹೆಂಡತಿ ಮಕ್ಕಳನ್ನು ಬೀದಿಯಲ್ಲಿ ನಿಲ್ಲಿಸಬೇಕಾ..? ಎಂದು ಮಾತನಾಡುವ ಸ್ಥಿತಿ ಕಾಂಗ್ರೆಸ್ ನಾಯಕರದ್ದಾಗಿದೆ ಎಂದು ರವಿ ವ್ಯಂಗ್ಯವಾಡಿದ್ದಾರೆ.