ಬಿಜೆಪಿಯಲ್ಲಿ ಬಹಳ ಎಚ್ಚರಿಕೆಯಿಂದ ಅಭ್ಯರ್ಥಿಗಳ ಆಯ್ಕೆ, ಪ್ರತಿ ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರು!

ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

First Published Apr 5, 2023, 10:33 PM IST | Last Updated Apr 5, 2023, 10:33 PM IST

ಬೆಂಗಳೂರು (ಏ.5): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕಡ್ಡಾಯವಾಗಿ ಮೂವರು ಆಕಾಂಕ್ಷಿಗಳ ಅಥವಾ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುವಂತೆ ಬಿಜೆಪಿ ಹೈಕಮಾಂಡ್‌ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದ ರೆಸಾರ್ಚ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಸಾಮಾನ್ಯವಾಗಿ ಹಿಂದಿನ ಚುನಾವಣೆಗಳಲ್ಲಿ ರಾಜ್ಯ ಕೋರ್‌ ಕಮಿಟಿಯು ಎರಡು ಅಥವಾ ಮೂರು ಗಂಟೆಗಳ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಸಿದ್ಧಪಡಿಸಿ ದೆಹಲಿಗೆ ಕಳುಹಿಸುತ್ತಿತ್ತು. ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎರಡು ದಿನಗಳ ಕಾಲ ಸುದೀರ್ಘ ಕೋರ್‌ ಕಮಿಟಿ ಸಭೆ ನಡೆಯುತ್ತಿದೆ.

Video Top Stories