ಐದಾರು ಬಾರಿ ಗೆದ್ದ ನಾಯಕರಿಗೆ ಕೊಕ್ ನೀಡಿ ಹೊಸಬರಿಗೆ ಅವಕಾಶ ಸಾಧ್ಯತೆ, ಬಿಜೆಪಿ ಟಿಕೆಟ್ ಕಸರತ್ತು!

ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ಕಸರತ್ತು ನಡೆಯುತ್ತಿದೆ. ದೆಹಲಿಯಲ್ಲಿ ಸಾಲು ಸಾಲು ಸಭೆಗಳಲ್ಲಿ ಕೆಲ ಮಹತ್ವ ವಿಚಾರ ಚರ್ಚೆಯಾಗಿದೆ. ಇದರಲ್ಲಿ ಐದಾರು ಬಾರಿ ಗೆದ್ದ ನಾಯಕರ ಬದಲು ಹೊಸಬರಿಗೆ ಟಿಕೆಟ್ ನೀಡುವ ವಿಚಾರವೂ ಚರ್ಚೆಯಾಗಿದೆ. ಬಿಜೆಪಿ ಟಿಕೆಟ್ ಕಸರತ್ತು, ಮೈಸೂರಿಗೆ ಪ್ರಧಾನಿ ಮೋದಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

First Published Apr 8, 2023, 11:33 PM IST | Last Updated Apr 8, 2023, 11:34 PM IST

224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಚರ್ಚೆ ನಾಳೆ ನಡೆಯಲಿದೆ. ಜೆಪಿ ನಡ್ಡಾ, ಬಿಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಚರ್ಚೆ ನಡೆಸಲಿದ್ದಾರೆ. ಬಳಿಕ ಪ್ರಧಾನಿ ಅಧ್ಯಕ್ಷತೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ, ರಾಜ್ಯ ನಾಯಕರು, ಸಂಸದೀಯ ಮಂಡಳಿ ಸದಸ್ಯರು ಸತತ ಮೀಟಿಂಗ್ ನಡೆಸುತ್ತಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಕುರಿತು ಚರ್ಚೆ ನಡೆಯುತ್ತಿದೆ. ನಾಳೆ ಮೋದಿ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಿಂದ ಮೈಸೂರಿಗೆ ಆಗಮಿಸಿದ್ದಾರೆ. ರಾಡಿಸನ್ ಬ್ಲೂ ಹೊಟೆಲ್‌ನಲ್ಲಿ ಮೋದಿ ವಾಸ್ತವ್ಯ ಹೂಡಿದ್ದಾರೆ. ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಬಂಡೀಪರುದಲ್ಲಿ ಸಫಾರಿ ಮಾಡಲಿದ್ದಾರೆ. ಬಳಿಕ ತಮಿಳುನಾಡಿನ ತೆಪ್ಪಕಾಡು ಆನೆ ಕ್ಯಾಂಪ್‌ನಲ್ಲಿ ಬೊಮ್ಮ ಹಾಗೂ ಬೆಳ್ಳಿ ಸಿಬ್ಬಂದಿಗೆ ಸನ್ಮಾನ ಮಾಡಲಿದ್ದಾರೆ. ಮೋದಿ ಕಾರ್ಯಕ್ರಮದ ವಿವರ ಇಲ್ಲಿದೆ.

Video Top Stories