Asianet Suvarna News Asianet Suvarna News

ಈ ವಾರವೇ ಹೊಸ ಸಿಎಂ ಪ್ರಮಾಣವಚನ ಸ್ವೀಕಾರ?

Jul 27, 2021, 8:53 AM IST

ಬೆಂಗಳೂರು(ಜು.27):  ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಇದೇ ವಾರದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸಂಬಂಧ ದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ ಎನ್ನಲಾಗಿದೆ.

ಇದರ ಜತೆಗೆ ಕೇಂದ್ರದ ವೀಕ್ಷಕರು ರಾಜ್ಯಕ್ಕೆ ಆಗಮಿಸಿ, ಬುಧವಾರ ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.