ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ
ಸೋಮವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಇಂದಿನಿಂದ ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.
ಬೆಂಗಳೂರು: ರಾಜ್ಯ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಕಾಂಗ್ರೆಸ್‌ನ ಗ್ಯಾರಂಟಿಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತಯಾರಿ ಮಾಡಿಕೊಂಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಯೋಜನೆಗಳನ್ನು ಯತಾವತ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಲಿದ್ದಾರೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಎಂದು ಹೇಳಿದ್ದು, ಇದರಲ್ಲಿ 5 ಕೆಜಿ ಕೇಂದ್ರ ಕೊಡುತ್ತಿದೆ. ಆದ್ರೆ ಸರ್ಕಾರ ಕೊಡುವ ಹಣದಿಂದ 10 ಕೆಜಿ ಅಕ್ಕಿ ಸಿಗುವುದಿಲ್ಲ. ಹಾಗಾಗಿ ಮಾರುಕಟ್ಟೆಯಲ್ಲಿ ಅಕ್ಕಿಗೆ ಇರುವ ದರದ ಹಣವನ್ನೇ ಜನರಿಗೆ ಕೊಡಿ ಎಂದು ಈಗ ಬಿಜೆಪಿ ಪಟ್ಟು ಹಿಡಿದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ ಬಳಿಕ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ಖರೀದಿಸಬೇಕು ಎಂದು ಬಿಜೆಪಿ ಆಗ್ರಹಿಸಲಿದೆ. ಇದರ ಜೊತೆಗೆ ವಿದ್ಯುತ್ ಬಿಲ್ ಏರಿಕೆಗೆ ಸಂಬಂಧಿಸಿದಂತೆ ಸಹ ಪ್ರತಿಭಟನೆ ನಡೆಸಲಿದೆ.
ಇದನ್ನೂ ವೀಕ್ಷಿಸಿ: ಹಾಡಹಗಲೇ ಯುವಕನ ಬರ್ಬರ ಹತ್ಯೆ: ಸ್ಥಳೀಯರ ಮೊಬೈಲ್‌ನಲ್ಲಿ ಭಯಾನಕ ದೃಶ್ಯ ಸೆರೆ