Asianet Suvarna News Asianet Suvarna News

ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಬಂದು ತ್ರಿಶಂಕು ಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ!

ಜೆಡಿಎಸ್ ಮುಸ್ಲಿಮ್ ನಾಯಕರಿಗೆ ಬಹಿರಂಗ ಆಹ್ವಾನ ನೀಡಿದ ಸಿದ್ದರಾಮಯ್ಯ, ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ, ಸರ್ಕಾರದ ವಿರುದ್ದವೇ ಸಿಡಿದೆದ್ದ ಕಾಂಗ್ರೆಸ್ ಹಿರಿಯ ನಾಯಕ ಶಿವಶಂಕರಪ್ಪ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ.  ಜೆಡಿಎಸ್ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದಾರೆ. ಇಂದು ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಸ್ಲಿಂ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ ನೀಡಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿಗೆ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ಜೆಡಿಎಸ್‌ನಿಂದ ದೂರ ದೂರ ಸಾಗಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಮತ್ತೊಂದು ಬಡಿದಾಟ ಶುರುವಾಗಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಡಿಸಿಎಂ ಗುದ್ದಾಟ ಹೆಚ್ಚಾಗುತ್ತಿದೆ. ಇದರ ನಡುವೆ ಲಿಂಗಾಯಿತ್ ಹೋರಾಟ ಶುರುವಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಶಾಮನೂರ್ ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
 

Video Top Stories