Party Rounds: ಲಿಂಗಾಯತ ಚಕ್ರವ್ಯೂಹದಲ್ಲಿ ಸಿಲುಕಿದ ಸಿದ್ದರಾಮಯ್ಯ, ಬಹಿರಂಗ ಕ್ಷಮೆಗೆ ಬಿಜೆಪಿ ಪಟ್ಟು!
ರಾಜ್ಯದಲ್ಲಿ ಲಿಂಗಾಯತರೇ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಎಲ್ಲಾ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಬಹಿರಂಗವಾಗಿ ಲಿಂಗಾಯತರ ಕ್ಷಮೆ ಕೋರುವಂತೆ ಬಿಜೆಪಿ ತಿರುಗಿಬಿದ್ದಿದೆ.
ಬೆಂಗಳೂರು (ಏ.24):‘ರಾಜ್ಯದಲ್ಲಿ ಲಿಂಗಾಯತರೇ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಎಲ್ಲಾ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದು, ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತಿರುವ ಸಿದ್ದು, ‘ಲಿಂಗಾಯತರೆಲ್ಲರೂ ಭ್ರಷ್ಟಾಚಾರ ಮಾಡಿದ್ದಾರೆ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆ ಬಸವರಾಜ ಬೊಮ್ಮಾಯಿಗೆ ಮಾತ್ರವೇ ಸೀಮಿತ. ಚುನಾವಣೆ ಸಂದರ್ಭದಲ್ಲಿ ನನ್ನ ಹೇಳಿಕೆಯನ್ನು ತಿರುಚಿ, ಅದರ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬೊಮ್ಮಾಯಿ, ಸಚಿವರಾದ ಆರ್, ಅಶೋಕ್, ವಿ.ಸೋಮಣ್ಣ, ಶಾಸಕ ಬೆಲ್ಲದ, ಯತ್ನಾಳ, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯನವರ ಹೇಳಿಕೆಗೆ ಕಿಡಿ ಕಾರಿದ್ದು, ಬಹಿರಂಗವಾಗಿ ಲಿಂಗಾಯತರ ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ.