ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ: ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ

ಕಾಂಗ್ರೆಸ್‌ ಭಜರಂಗದಳ ನಿಷೇಧ ಪ್ರಸ್ತಾಪ ಬಿಜೆಪಿಗೆ ಅಸ್ತ್ರ
ಚುನಾವಣಾ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಪ್ರಚಾರ
ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಮತಯಾಚನೆ
 

First Published May 5, 2023, 1:17 PM IST | Last Updated May 5, 2023, 1:17 PM IST

ಬೆಂಗಳೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿತ್ತು. ಇದು ಇದೀಗ ಬಿಜೆಪಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಒಂದು ಕಡೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ರೆ, ಮತ್ತೊಂದೆಡೆ ಬಿಜೆಪಿ ನಾಯಕರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ. ಸತೀಶ್‌ ರೆಡ್ಡಿ ಪ್ರಚಾರದ ಜೊತೆಗೆ ದೇವರ ಮೊರೆ ಹೋಗಿದ್ದಾರೆ. ಮತಯಾಚನೆ ಮಾಡುವುದರ ಜೊತೆಗೆ ಹೆಚ್‌.ಎಸ್‌. ಆರ್‌ ಬಡಾವಣೆಯ ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಸತೀಶ್‌ ರೆಡ್ಡಿ, ಕಾಂಗ್ರೆಸ್‌ನವರು ಒಂದು ಸಮುದಾಯದ ಓಲೈಕೆಗಾಗಿ ಭಜರಂಗದಳ ಬ್ಯಾನ್‌ ಮಾಡುವುದಾಗಿ ಹೇಳುತ್ತಿದ್ದಾರೆ. ಅವರ ಓಲೈಕೆ ರಾಜಕಾರಣಕ್ಕೆ ಮತದಾರನ ಬೆಂಬಲ ಇಲ್ಲ. ರಾಜ್ಯದ ಜನ ಬಿಜೆಪಿಗೆ ಮತಹಾಕಲಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.