'ಸಂತೋಷ್ ಆತ್ಮಹತ್ಯೆ ಹಿಂದೆ ಕಾಂಗ್ರೆಸ್ ಕೈವಾಡ, ಇಂಥವನೊಬ್ಬನನ್ನು ರೆಡಿ ಮಾಡ್ತಾರೆ'
ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನವರ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮೈಸೂರು, (ಏ.12): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಕಾರಣ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ
ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನವರ ಪರ ಬ್ಯಾಟಿಂಗ್ ಮಾಡಿದ್ದಾರೆ.