Asianet Suvarna News Asianet Suvarna News

ಮುಂದುವರಿದ ಯತ್ನಾಳ್-ಯಡಿಯೂರಪ್ಪ ಮುಸುಕಿನ ಗುದ್ದಾಟ..!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ.

ವಿಜಯಪುರ, (ಜ,16): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ.

ಯತ್ನಾಳ್‌ಗೆ ಬಿಗ್ ಶಾಕ್ ಕೊಟ್ಟ ಬಿಎಸ್‌ವೈ, ನನಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ ಎಂದ ಶಾಸಕ 

ಸಚಿವ ಸ್ಥಾನ ನೀಡದ ಸಂಬಂಧ ಬಹಿರಂಗಾವಾಗಿ ಸಿಎಂ ಬಿಎಸ್‌ವೈ ವಿರುದ್ಧ ವಾಗ್ದಾಳಿ ಮಾಡಿದ್ದ ಯತ್ನಾಳ್‌, ಇದೀಗ ರಾಜಾಹುಲಿ, ರಾಜಾಹುಲಿ ಎನ್ನುತ ವ್ಯಂಗ್ಯವಾಡಿದ್ದಾರೆ.