ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಒಲವು ಕಾಂಗ್ರೆಸ್ ನತ್ತ?
ವಿಧಾನಸಭಾ ಚುನಾವಣೆಗೆ ದಿನಗಣನೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಜೋರಾಗುತ್ತಿದೆ. ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. 2018ರ ವರೆಗೂ ಕೈ ಪಡಯಲ್ಲಿದ್ದ ಗೋಪಾಲಕೃಷ್ಣ, ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇನ್ನು ಎನ್. ವೈ. ಗೋಪಾಲಕೃಷ್ಣ ಮೊಳಕಾಲ್ಮೂರಿನಿಂದ 4 ಬಾರಿ,ಬಳ್ಳಾರಿ ಗ್ರಾ ಒಂದು ಬಾರಿ ಶಾಸಕರಾಗಿದ್ದು, ಇಗ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ವಯಸ್ಸಿನ ಕಾರಣದಿಂದ ಬಿಜೆಪಿಯಲ್ಲಿ ಟಿಕೆಟ್ ಸಿಗುವುದು ಅನುಮಾನವಾಗಿರುವುದರಿಂದ ಶಿಘ್ರದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಅದಲ್ಲದೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಗೋಪಾಲ ಕೃಷ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗೋಪಾಲ ಕೃಷ್ಣ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಭರವಸೆ ಸಿಕ್ಕಿದೆ ಎಂದು ತಿಳಿದು ಬಂದಿದೆ.