Party Rounds: ಎಸ್‌.ಟಿ.ಸೋಮಶೇಖರ್‌ ಗೃಹಲಕ್ಷ್ಮೀ ಕಾರ್ಯಕ್ರಮ ಕಂಡು ಬಿಜೆಪಿಗರೇ ಶಾಕ್!

ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಅದ್ಧೂರಿಯಾಗಿ ಚಾಲನೆ ಸಿಕ್ಕಿದ್ದು, ಇತ್ತ ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅದ್ದೂರಿ ಸ್ವಾಗತ ದೊರೆತಿದೆ. ಜೊತೆಗೆ ಮತ್ತೊಂದು ಇಂಟ್ರಸ್ಟಿಂಗ್ ಅಂದ್ರೆ, ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ತಮ್ಮ ಕ್ಷೇತ್ರದಲ್ಲಿ ಗೃಹಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. 

First Published Aug 30, 2023, 8:24 PM IST | Last Updated Aug 30, 2023, 8:24 PM IST

ಬೆಂಗಳೂರು (ಆ.30): ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಅದ್ಧೂರಿಯಾಗಿ ಚಾಲನೆ ಸಿಕ್ಕಿದ್ದು, ಇತ್ತ ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅದ್ದೂರಿ ಸ್ವಾಗತ ದೊರೆತಿದೆ. ಜೊತೆಗೆ ಮತ್ತೊಂದು ಇಂಟ್ರಸ್ಟಿಂಗ್ ಅಂದ್ರೆ, ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ತಮ್ಮ ಕ್ಷೇತ್ರದಲ್ಲಿ ಗೃಹಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಬಿಜೆಪಿ ವಿರುದ್ಧ ಗುಡುಗುತ್ತಲೇ ಕಾಂಗ್ರೆಸ್ ಕಡೆ ಒಲವು ತೋರಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಇವತ್ತು ಗೃಹಲಕ್ಷ್ಮೀ ಯೋಜನೆಯನ್ನ ತಮ್ಮ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಜಾರಿಗೊಳಿಸಿರುವುದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ. ಇದರ ಮಧ್ಯೆಯೇ ಸೋಮಶೇಖರ್​ ಲವಲವಿಕೆಯಿಂದ ಗೃಹಲಕ್ಷ್ಮೀ ಯೋಜನೆ ಚಾಲನೆ ನೀಡಿರುವುದು ಬಿಜೆಪಿಗೆ ಇರುಸುಮುರುಸು ಉಂಟುಮಾಡಿದಂತಾಗಿದೆ. ಅಲ್ಲದೇ ಬಿಜೆಪಿ ಬಿಡಲ್ಲ ಎಂದು ಹೇಳುತ್ತಲೇ ಮಾನಸಿಕವಾಗಿ ಕಾಂಗ್ರೆಸ್ ಸೇರಿದ್ದಾರಾ ಎನ್ನು ಪ್ರಶ್ನೆಗಳು, ಚರ್ಚೆಗಳು ಶುರುವಾಗಿವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.