9 ರಾಜ್ಯಗಳ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ, ಪ್ರಧಾನಿ ಭರ್ಜರಿ ರೋಡ್‌ ಶೋ!

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ದೆಹಲಿಯಲ್ಲಿ ಆರಂಭವಾಗಿದೆ. ಮುಂಬರುವ 9 ರಾಜ್ಯಗಳ ವಿಧಾನಸಭೆ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರವನ್ನು ಇಲ್ಲಿ ಚರ್ಚೆ ಮಾಡಲಾಗುತ್ತದೆ. ಕಾರ್ಯಕಾರಿಣಿಗೆ ಆಗಮಿಸುವ ವೇಳೆ ಪ್ರಧಾನಿ ಮೋದಿ 15 ನಿಮಿಷಗಳ ಕಾಲ ಭರ್ಜರಿ ರೋಡ್‌ ಶೋ ನಡೆಸಿದ್ದಾರೆ.

First Published Jan 16, 2023, 6:19 PM IST | Last Updated Jan 16, 2023, 6:19 PM IST


ನವದೆಹಲಿ (ಜ.16): 2023ರಲ್ಲಿ 9 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದ್ದು, ಇಂದಿನಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಇದು ಮಂಗಳವಾರದವರೆಗೆ ಅಂದರೆ ಜನವರಿ 17ರವರೆಗೆ ಈ ಸಭೆನಡೆಯಲಿದೆ. ಸಭೆ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದ್ ಮಾರ್ಗ್‌ನಿಂದ ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ವರೆಗೆ ಸುಮಾರು 15 ನಿಮಿಷಗಳ ಕಾಲ ರೋಡ್‌ಶೋ ನಡೆಸಿದರು. ಇದಾದ ಬಳಿಕ ಕಾರ್ಯಕಾರಿಣಿ ಸಭೆಗೆ ಆಗಮಿಸಿದರು.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಾಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ನಡ್ಡಾ ಅವರು ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪ್ರಧಾನಿ ಮೋದಿಯಿಂದ ಮೆಗಾ ರೋಡ್‌ಶೋ: ದೆಹಲಿಯಲ್ಲಿ 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಅವರು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಪಿ ನಡ್ಡಾ ಅವರು'2023 ನಮಗೆ ಬಹಳ ಮುಖ್ಯ. ಈ ವರ್ಷ 9 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಾಗೂ 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗೆಲ್ಲಲೇಬೇಕು' ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. ಈ ನಡುವೆ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಅವಧಿ ಮುಂದುವರಿಯುವ ಸಾಧ್ಯತೆಯೂ ಗೋಚರವಾಗಿದೆ.