ಜೂ. 18ಕ್ಕೆ ಚಿತ್ರದುರ್ಗಕ್ಕೆ ಜೆ ಪಿ ನಡ್ಡಾ, ಪಂಚಾಯತ್ ಎಲೆಕ್ಷನ್‌ಗೂ ಬಿಜೆಪಿ ತಯಾರಿ

ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಸಮಾವೇಶವು ಜೂನ್‌ 18 ರಂದು ಚಿತ್ರದುರ್ಗದಲ್ಲಿ (Chitradurga) ಆಯೋಜಿಸಲಾಗಿದ್ದು ರಾಷ್ಟ್ರೀಯ ಅಧ್ಯಕ್ಷ ನಡ್ಡಾ (JP Nadda) ಆಗಮಿಸಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 17): ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರ ಸಮಾವೇಶವು ಜೂನ್‌ 18 ರಂದು ಚಿತ್ರದುರ್ಗದಲ್ಲಿ (Chitradurga) ಆಯೋಜಿಸಲಾಗಿದ್ದು ರಾಷ್ಟ್ರೀಯ ಅಧ್ಯಕ್ಷ ನಡ್ಡಾ (JP Nadda) ಆಗಮಿಸಲಿದ್ದಾರೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಜನಪರ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯಲಿರುವ ಸಮಾವೇಶವನ್ನು ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ. 

BBMP ಚುನಾವಣೆ: ಮೋದಿ, ನಡ್ಡಾರಂತ ನಾಯಕರ ಮೂಲಕ ಪ್ರಚಾರಕ್ಕೆ ಬಿಜೆಪಿ ಪ್ಲ್ಯಾನ್

ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಸದಸ್ಯರುಗಳನ್ನುದ್ದೇಶಿಸಿ ಅಂದು ಸಂಜೆ ನಾಲ್ಕು ಗಂಟೆಗೆ ನಡ್ಡಾ ಭಾಷಣ ಮಾಡಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಸಂಸದರು, ಸಚಿವರು, ಶಾಸಕರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 

Related Video