Asianet Suvarna News Asianet Suvarna News

ಬಿಜೆಪಿಯಿಂದ ಹೊಸ ರಾಜಕೀಯ ನಡೆ? 'ಈ' ಕ್ಷೇತ್ರದಿಂದ ಪ್ರಭಾವಿ ಮುಸ್ಲಿಮ್‌ ನಾಯಕನ ಪುತ್ರ ಕಣಕ್ಕೆ?

ರಾಜ್ಯದ ವಿಧಾನಸಭಾ ಚುನಾವಣೆ 2023ರಲ್ಲಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಸಿದ್ಧವಾಗಿರುವ ಬಿಜೆಪಿ ಈಗ ಬೆಂಗಳೂರಿನ ಶಿವಾಜಿನಗರದಲ್ಲಿ ಮುಸ್ಲಿಂ ನಾಯಕರ ಮಗನನ್ನೇ ಕಣಕ್ಕಿಳಿಸಲು ಮುಂದಾಗಿದೆ. 

ಬೆಂಗಳೂರು (ಮಾ.22):  ರಾಜ್ಯದ ವಿಧಾನಸಭಾ ಚುನಾವಣೆ 2023ರಲ್ಲಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಸಿದ್ಧವಾಗಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಈಗ ಬೆಂಗಳೂರಿನ ಶಿವಾಜಿನಗರದಲ್ಲಿ ಮುಸ್ಲಿಂ ನಾಯಕರ ಮಗನನ್ನೇ ಕಣಕ್ಕಿಳಿಸಲು ಮುಂದಾಗಿದೆ. 
ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಮುಸ್ಲಿಂ ಬಾಹುಳ್ಯವಿರುವ ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗಳೇ ಗೆಲ್ಲುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮುಸ್ಲಿಂ ವಿರೋಧಿ ಪಕ್ಷವೆಂತಲೇ ಕರೆಸಿಕೊಳ್ಳುತ್ತಿರುವ ಬಿಜೆಪಿ ಈಗ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದೆ. ಇನ್ನು ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ರೋಷನ್‌ ಬೇಗ್‌ ಅವರು ದೆಹಲಿಯಲ್ಲಿ ನಡೆದಿ ಬಿಜೆಪಿ ಅಲ್ಪ ಸಂಖ್ಯಾತರ ಸಭೆಯಲ್ಲಿ ಭಾಗವಹಿಸಿದ್ದರು. ಈ ಬೆನ್ನಲ್ಲೇ ರೋಷನ್‌ ಬೇಗ್‌ ಅವರ ಪುತ್ರ ರುಮಾನ್‌ ಬೇಗ್‌ ಅವರಿಗೆ ಟಿಕೆಟ್‌ ನೀಡಲು ತೀರ್ಮಾನಿಸಿದೆ.