Asianet Suvarna News Asianet Suvarna News

'ಗೋ ಬ್ಯಾಕ್ ಸೋಮಣ್ಣ' ಚಾಮರಾಜನಗರದಿಂದ ಕಣಕ್ಕಿಳಿಯಲು ಮುಂದಾದ ವಿ.ಸೋಮಣ್ಣಗೆ ಬಿಗ್ ಶಾಕ್!

ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕ ಎಚ್ಚರಿಸಿದೆ.

ಸಿದ್ದರಾಮಯ್ಯ ವಿರುದ್ದ ಸ್ಪರ್ಧೆ ಮಾಡುವ ಕುರಿತ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು. ಈಗಾಗಲೇ ನನಗೆ ನನ್ನ ಕ್ಷೇತ್ರ ಇದೆ. ಅದಕ್ಕೂ ಮೀರಿ ಚಾಮರಾಜನಗರಕ್ಕೆ ಹೋಗಿ ಅಲ್ಲಿ ನೀವು ಸೆಟಲ್ ಆಗುವಂತೆ ನನಗೆ ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನು ಬಿಟ್ಟು ಹೋಗುವ ಮುನ್ಸೂಚನೆ ನೀಡಿದ್ದಾರೆ. 

ಇದರ ಬೆನ್ನಲ್ಲೇ  ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ.  ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿದ್ದು, ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.