40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಆ.25):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಸೇರಿ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ. ಇಷ್ಟೊಂದು ಭ್ರಷ್ಟ ಸರ್ಕಾರವನ್ನು ನನ್ನ ಜೀವನದಲ್ಲೇ ನೋಡಿಲ್ಲ. 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿದರೆ ಎಲ್ಲಾ ದಾಖಲೆ ನೀಡುತ್ತೇವೆ. ಸಾಬೀತುಪಡಿಸಲು ವಿಫಲವಾದರೆ ಯಾವ ಶಿಕ್ಷೆ ಅನುಭವಿಸಲೂ ಸಿದ್ಧವಿದ್ದೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ. 

ಸಿಎಂ ಬೊಮ್ಮಾಯಿ ಸೇರಿ ಸರ್ಕಾರದ ಎಲ್ಲರೂ ಕಮಿಷನ್‌ ಕೇಳ್ತಾರೆ: ಗುತ್ತಿಗೆದಾರರ ಸಂಘ ಗಂಭೀರ ಆರೋಪ

ಇದರಿಂದ ಕಮಿಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.ಇದನ್ನೇ ಕಾಂಗ್ರೆಸ್ ಚುನಾವಣೆ ಅಸ್ತ್ರ ಮಾಡಿಕೊಂಡು ಜನರ ಬಳಿ ಹೋಗುವ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಆತಂಕದಲ್ಲಿದ್ದು, ಕಾಂಗ್ರೆಸ್‌ ವಿರುದ್ಧ ರಣತಂತ್ರ ಹೆಣೆದಿದೆ.

Related Video