ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

ತಡರಾತ್ರಿ ಬಿಜೆಪಿಯ ಅಂತಿಮ ಪಟ್ಟಿ ರಿಲೀಸ್‌
224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಘೋಷಣೆ
ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದ ಬಿಜೆಪಿ

First Published Apr 20, 2023, 11:16 AM IST | Last Updated Apr 20, 2023, 11:16 AM IST

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಈಶ್ವರಪ್ಪ ಕುಟುಂಬಕ್ಕೆ ಶಾಕ್‌ ನೀಡಲಾಗಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಕುಟುಂಬಕ್ಕೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿಲ್ಲ. ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಮಣೆಹಾಕಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದೆ. ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಅವರು, ಪಕ್ಷ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್‌ ನೀಡದೆ.ನನ್ನ ಬೆಳವಣಿಗೆಗೆ ಸಾಕಷ್ಟು ಹಿರಿಯರು ಶ್ರಮಿಸಿದ್ದಾರೆ. ಪ್ರಮುಖವಾಗಿ ಯಡಿಯೂರಪ್ಪ, ಈಶ್ವರಪ್ಪನವರು ತಮ್ಮ ಶಕ್ತಿಯನ್ನು ಧಾರೆ ಎರೆದು ನನ್ನನ್ನು ಬೆಳೆಸಿದ್ದಾರೆ. ಅವರ ಇಚ್ಛೆಗೆ ತಕ್ಕಂತೆ ನಾನು ನಡೆದುಕೊಳ್ಳುವೆ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

Video Top Stories