Mandya: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

Share this Video
  • FB
  • Linkdin
  • Whatsapp

ಮಂಡ್ಯ (ಡಿ.24): ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ ಕೇಸರಿ ಪಡೆ. ಸಕ್ಕರೆ ನಾಡು ಮಂಡ್ಯಕ್ಕೆ ಚುನಾವಣಾ ಚತುರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯದಲ್ಲಿ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲು ರಣತಂತ್ರವನ್ನು ಹೆಣೆಯಲಾಗುತ್ತಿದೆ.

ಡಿ.30ಕ್ಕೆ ಅಮಿತ್‌ ಶಾ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಲಕ್ಷಾಂತರ ಜನರನ್ನು ಸೇರಿಸಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಹಾಲು ಉತ್ಪಾದಕರ ಕಟ್ಟಡವನ್ನು ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಆದರೆ, ಈ ವೇಳೆ ಅಮಿತ್‌ ಶಾ ಆಗಮನದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮೇಲುಕೋಟೆ, ಕೆ.ಆರ್.ಪೇಟೆ, ಮಳವಳ್ಳಿ, ಮದ್ದೂರು ಮತ್ತು ಮಂಡ್ಯ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಆದರೆ, ಇಲ್ಲಿ ನಡೆಯುವ ಬೃಹತ್‌ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನವನ್ನು ಕೂಡ ಮಾಡಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಸಿ ಹಳೆ ಮೈಸೂರು ಭಾಗದಲ್ಲಿ ನೆಲೆಯೂರಲು ಬಿಜೆಪಿ ಮುಂದಡಿಯಿಡುತ್ತಿದೆ.

Related Video