ಯಡಿಯೂರಪ್ಪ ಟಿಕೆಟ್‌ ಬಾಂಬ್- ಬಿಜೆಪಿಯಲ್ಲಿ ಭಾರಿ ಕಂಪನ: ಟಿಕೆಟ್‌ ಭಾಗ್ಯ ಇಲ್ಲದ ಶಾಸಕರು ಇವರೆನಾ?

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ನೀಡಿರುವ ಹೇಳಿಕೆ ಬಿಜೆಪಿ ಶಾಸಕರಲ್ಲಿ ಭಾರಿ ಕಂಪನ ಸೃಷ್ಟಿಸಿದೆ.

Share this Video
  • FB
  • Linkdin
  • Whatsapp

ಕಲಬುರಗಿ (ಮಾ.08): ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ವಿಜಯೇಂದ್ರ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದನ್ನು ಪಕ್ಷದ ಹೈಕಮಾಡ್‌ ತೀರ್ಮಾನಿಸಲಿದೆ. ಬಹುಶ: ಈಗಿನ ಮಟ್ಟಿಗೆ ಶಿಕಾರಿಪುರದಿಂದಲೇ ಸ್ಪರ್ಧಿಸುವ ಸಾಧ್ಯತೆಗಳು ಅಧಿಕ ಎಂದು ಹೇಳಿದರು. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

Related Video