ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಒಲವು ತೋರಿದ ಸೂರ್ಯಕಾಂತ ನಾಗಮಾರಪಲ್ಲಿ..

ಬಿಜೆಪಿಗೆ ಮತ್ತೆ ಬಂಡಾಯದ ಬಿಸಿ ತಟ್ಟುತ್ತಿದ್ದು. ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ  ಆಕಾಂಕ್ಷಿಯಾಗಿದ್ದ ಸೂರ್ಯಕಾಂತ ನಾಗಮಾರಪಳ್ಳಿ ಜೆಡಿಎಸ್ ಪಕ್ಷ ಸೇರಿದ್ದಾರೆ. 

First Published Apr 17, 2023, 3:20 PM IST | Last Updated Apr 17, 2023, 3:20 PM IST

ಬಿಜೆಪಿಗೆ ಮತ್ತೆ ಬಂಡಾಯದ ಬಿಸಿ ತಟ್ಟುತ್ತಿದ್ದು. ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ  ಆಕಾಂಕ್ಷಿಯಾಗಿದ್ದ ಸೂರ್ಯಕಾಂತ ನಾಗಮಾರಪಳ್ಳಿ ಜೆಡಿಎಸ್ ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ದೊರೆಯದ ಕಾರಣ ಸಿಟ್ಟಾಗಿದ್ದ ಬಿಜೆಪಿ ರಾಜ್ಯ ಕಾರ‍್ಯಕಾರಿಣಿ ಸದಸ್ಯರೂ ಆಗಿದ್ದ ಸೂರ್ಯಕಾಂತ ನಾಗಮಾರಪಳ್ಳಿ, ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಧಿಕೃತವಾಗಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ.  ಅಸಮಾಧಾನಗೊಂಡಿದ್ದ ಸೂರ್ಯಕಾಂತ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ, ಜೆಡಿಎಸ್ ಸೇರುವ ನಿರ್ಧಾರ ಮಾಡಿದ್ದರು. ಇದೀಗ ಜೆಡಿಎಸ್‌ ಸೇರಿದ್ದಾರೆ.

Video Top Stories