ಮೂರು ಕಡೆ ಬಿಜೆಪಿ ಗೆಲುವು ಖಚಿತ : ಬಹುಮತ ಕನ್ಫರ್ಮ್

ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ.31): ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಪ್ರತಿ ಮತದಾರರನ್ನು ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಪಕ್ಷದ ಉಸ್ತುವಾರಿಯೂ ಆಗಿರುವ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮಾಡಿದ ಅಭಿವೃದ್ಧಿಯೇ ಗೆಲವಿಗೆ ಶ್ರೀರಕ್ಷೆ: ಅರವಿಂದ ಬೆಲ್ಲದ

ಪಾಲಿಕೆಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗೌಪ್ಯವಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ. ಬಹಿರಂಗವಾಗಿಯೇ ಯೋಜನೆಗಳನ್ನು ರೂಪಿಸಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಸವಾಲುಗಳನ್ನು ಎದುರಿಸಲು ಬಿಜೆಪಿ ಸಿದ್ಧವಿದೆ. ಕೋವಿಡ್‌ ಸಮಯದಲ್ಲಿಯೂ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್‌ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಕಾರ್ಯಕರ್ತರ, ನಾಯಕರ ಸೇವೆಯೇ ನಮಗೆ ಶ್ರೀರಕ್ಷೆಯಾಗಲಿದೆ. ನಮ್ಮ ಸೇವೆಯನ್ನು ಜನತೆ ಸ್ವಾಗತಿಸಿದ್ದು, ಸೇವೆಗೂ ಸಿದ್ಧ, ರಾಜಕಾರಣಕ್ಕೂ ಸಿದ್ಧ ಎಂಬುದನ್ನು ಪಕ್ಷದ ಕಾರ್ಯಕರ್ತರು, ನಾಯಕರು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

Related Video