
ಗುಜರಾತ್, ದೆಹಲಿ ಪಾಲಿಕೆ ಚುನಾವಣಾ ತಂತ್ರ ಅನುಸರಿಸುತ್ತಾ ಕರ್ನಾಟಕ..? ಸಂತೋಷ್ ಹೇಳಿಕೆ ಸಂಚಲನ
ರಾಜ್ಯ ವಿಧಾನಸಭೆ ಚುನಾವಣೆಗೆ (Assembly Election 2023) ಒಂದು ವರ್ಷವಷ್ಟೇ ಇದೆ ಎನ್ನುವಾಗ ಬಿ ಎಲ್ ಸಂತೋಷ್ ನೀಡಿದ ಹೇಳಿಕೆಯನ್ನು ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಸಂದೇಶ ಎಂದು ಪ್ರತಿಪಕ್ಷ ಕಾಂಗ್ರೆಸ್ ವಿಶ್ಲೇಷಿಸಿದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು (ಮೇ. 02): ಮೈಸೂರಿನ (Mysuru) ರಿಯೋ ಮೆರೀಡಿಯನ್ ಹೋಟೆಲ್ ಸಭಾಂಗಣದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಸಂಬಂಧ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಎಲ್. ಸಂತೋಷ್ (BL Santosh) ದೆಹಲಿ, ಗುಜರಾತ್ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಡೆಸಿದ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ಎದುರಿಸಿದ್ದೇವೆ. ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೇ ಟಿಕೆಟ್ ನೀಡಲಿಲ್ಲ. ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನೂ ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂಥ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದ್ದರು. ಅಲ್ಲದೆ, ಗುಜರಾತ್ನಲ್ಲಿ ಮುಖ್ಯಮಂತ್ರಿ ಸೇರಿ ಇಡೀ ಕ್ಯಾಬಿನೆಟ್ ಅನ್ನೇ ಪುನರ್ ರಚಿಸಿದ್ದೆವು' ಎಂದಿದ್ದಾರೆ.
ಬಿಜೆಪಿ ಮಿಷನ್ 2023: ಕೇಂದ್ರ ನಾಯಕರ ನೇತೃತ್ವದಲ್ಲಿ ತಿಂಗಳಿಗೊಂದು ಅಭಿಯಾನ ನಿಗದಿ
ರಾಜ್ಯ ವಿಧಾನಸಭೆ ಚುನಾವಣೆಗೆ (Assembly Election 2023) ಒಂದು ವರ್ಷವಷ್ಟೇ ಇದೆ ಎನ್ನುವಾಗ ಪಕ್ಷದ ರಾಷ್ಟ್ರೀಯ ಮುಖಂಡರೊಬ್ಬರು ನೀಡಿದ ಈ ಹೇಳಿಕೆಯನ್ನು ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಸಂದೇಶ ಎಂದು ಪ್ರತಿಪಕ್ಷ ಕಾಂಗ್ರೆಸ್ ವಿಶ್ಲೇಷಿಸಿದರೆ, ರಾಜ್ಯ ಬಿಜೆಪಿ ಮುಖಂಡರು ಮಾತ್ರ ಆ ರೀತಿಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.