
ಲಿಂಗಾಯತ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ: ಬೊಮ್ಮಾಯಿ
ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ
ಇಡೀ ಸಮಾಜದ ಆತ್ಮವನ್ನು ಸಿದ್ದರಾಮಯ್ಯ ತುಳಿದಿದ್ದಾರೆ
ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಬೆಂಗಳೂರು: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ ಆಗಿದ್ದಾರೆ. ಮಾಜಿ ಸಿಎಂ ಆಗಿರುವ ಸಿದ್ದರಾಮಯ್ಯರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಅವರೊಬ್ಬರು ಹಿರಿಯ ನಾಯಕರು. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಸಿದ್ದರಾಮಯ್ಯ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ಇಡೀ ಲಿಂಗಾಯತ ಸಮಾಜದ ಆತ್ಮವನ್ನು ಕುಲುಕಿದ್ದಾರೆ ಎಂದು ಹೇಳುವ ಮೂಲಕ ಸಿದ್ದು ವಿರುದ್ಧ ಸಿಎಂ ಗರಂ ಆಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಶೆಟ್ಟರ್, ಸವದಿಗೆ ಟಿಕೆಟ್ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್