ಮನೆಗೆ ಬೆಂಕಿ ಬಿದ್ದರೂ ಮೌನವಾಗಿದ್ದ ಅಖಂಡ ಶ್ರೀನಿವಾಸ್‌ಗೆ ಕೈ ಟಿಕೆಟ್ ಮಿಸ್ಸಾಗುತ್ತಾ?
ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲೂ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಹೆಸರು ಇಲ್ಲದ ಹಿನ್ನೆಲೆಯಲ್ಲಿ ಇಂದು ಭೋವಿ ಸಮಾಜದ ಮುಖಂಡರು ಕಾಂಗ್ರೆಸ್ ಮುಖಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಖಂಡ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲೂ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಹೆಸರು ಇಲ್ಲದ ಹಿನ್ನೆಲೆಯಲ್ಲಿ ಇಂದು ಭೋವಿ ಸಮಾಜದ ಮುಖಂಡರು ಕಾಂಗ್ರೆಸ್ ಮುಖಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಾಟೆ ಪ್ರಕರಣದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿಯವರ ಮನೆಗೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಕಾಂಗ್ರೆಸ್ ನಾಯಕರು ಯಾರು ಅಖಂಡ ಶ್ರೀನಿವಾಸ್ ಮೂರ್ತಿ ಪರ ಮಾತನಾಡದೇ ಮೌನಕ್ಕೆ ಜಾರಿದ್ದರು. ಶ್ರೀನಿವಾಸ್ ಕೂಡ ತಮ್ಮ ವೋಟ್ ಬ್ಯಾಂಕ್‌ಗೆ ಹಾನಿಯಾಗುತ್ತದೆ ಎಂದು ಮೌನವಾಗಿದ್ದರು. ಆದರೆ ಈಗ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡದಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.